ಅಭಿಪ್ರಾಯ / ಸಲಹೆಗಳು

ವಿದ್ಯಾರ್ಥಿ ರಿಯಾಯಿತಿ ಪಾಸ್

ಪೀಠಿಕೆ :

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರಿಗೆ ಸುರಕ್ಷಿತ, ಮಿತವ್ಯಯ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಹೋಗಿ ಬರಲು ಅನುಕೂಲವಾಗುವ ದೃಷ್ಟಿಯಿಂದ ವಿದ್ಯಾರ್ಥಿಗಳ ವಾಸಸ್ಥಳದಿಂದ ಶಾಲಾ-ಕಾಲೇಜುವರೆಗೆ 60 ಕಿ.ಮೀ. ಪರಿಮಿತಿಯಲ್ಲಿ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಉಚಿತ/ರಿಯಾಯಿತಿ ಬಸ್ ಪಾಸ್‍ಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಬಸ್ ಪಾಸ್‍ಗಳನ್ನು ಪಡೆಯಲು ಈ ಕೆಳಕಾಣಿಸಿದ ಅರ್ಹತೆಯೊಂದಿಗೆ ದಾಖಲಾತಿಗಳನ್ನು ಸಲ್ಲಿಸಬೇಕಾಗಿರುತ್ತದೆ.                

 

ಪ್ರಸ್ತುತ ಜಾರಿಯಲ್ಲಿರುವ ವಿವಿಧ ವರ್ಗದ ವಿದ್ಯಾರ್ಥಿಗಳ ಬಸ್ ಪಾಸ್ ದರಗಳು   ಕೆಳಗಿನಂತಿರುತ್ತವೆ.

                                                                                                                                   

ಕ್ರ.ಸಂ ಪಾಸುಗಳ ವಿವರ ನಿಗದಿತ ಅವಧಿ ಪಾಸಿನ ದರ ರೂ.ಗಳಲ್ಲಿ
ಸಾಮಾನ್ಯ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ

1

7ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ

10 ತಿಂಗಳಿಗೆ

ಉಚಿತ

ಉಚಿತ

2

ಹೈಸ್ಕೂಲ್ ವಿದ್ಯಾರ್ಥಿಗಳಿಗೆ

10 ತಿಂಗಳಿಗೆ

600

ಉಚಿತ

3

ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ

10 ತಿಂಗಳಿಗೆ

400

ಉಚಿತ

4

ಕಾಲೇಜು&ಡಿಪ್ಲೊಮಾ ವಿದ್ಯಾರ್ಥಿಗಳಿಗೆ

10 ತಿಂಗಳಿಗೆ

900

ಉಚಿತ

5

ಐ.ಟಿ.ಐ ವಿದ್ಯಾರ್ಥಿಗಳಿಗೆ

12 ತಿಂಗಳಿಗೆ

1150

ಉಚಿತ

6

ವೃತ್ತಿಪರ ಕೋರ್ಸಗಳಾದ ವೈದ್ಯಕೀಯ/ಇಂಜಿನಿಯರಿಂಗ್, ಇತರೆ ವಿದ್ಯಾರ್ಥಿಗಳಿಗೆ.

10 ತಿಂಗಳಿಗೆ

1400

ಉಚಿತ

7

ಸಂಜೆ ಕಾಲೇಜು/ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ.

10 ತಿಂಗಳಿಗೆ.

1200

ಉಚಿತ

 

 

ವಿದ್ಯಾರ್ಥಿಗಳಿಗೆ ಬಸ್ಪಾಸ್ ವಿತರಿಸುವ ಕುರಿತು ಮಾರ್ಗಸೂಚಿಗಳು:

 

1. ವಿದ್ಯಾರ್ಥಿಯು ಕರ್ನಾಟಕ ಸರ್ಕಾರ/ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳು/ವಿಶ್ವವಿದ್ಯಾಲಯಗಳ ಪೂರ್ಣಾವಧಿ ಕೋರ್ಸುಗಳಲ್ಲಿ ಅಭ್ಯಸಿಸುತ್ತಿರಬೇಕು.

2. ವಿದ್ಯಾರ್ಥಿ ಬಸ್‍ಪಾಸ್‍ಗಳನ್ನು ವಾಸಸ್ಥಳದಿಂದ ಶಾಲಾ ಕಾಲೇಜು ವರೆಗೆ 60 ಕಿಮೀ ಪರಿಮಿತಿಯಲ್ಲಿ ವಿತರಿಸಲಾಗುವುದು.

3. ವಿದ್ಯಾರ್ಥಿ ರಿಯಾಯಿತಿ ಪಾಸ್ ಪಡೆಯುವ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿಯನ್ನು ಭರ್ತಿ ಮಾಡಬೇಕು. (kkrtc.org/www.ksrtc.org)

4. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಶಾಲಾ, ಕಾಲೇಜುಗಳ ಮುಖ್ಯಸ್ಥರಿಂದ ದೃಢೀಕರಿಸಬೇಕು

5. ಶಾಲಾ ಕಾಲೇಜ್‍ನಲ್ಲಿ ಪ್ರವೇಶ ಪಡೆದ ಕುರಿತು ಶುಲ್ಕ ಪಾವತಿಸಿದ ರಶೀದಿಯನ್ನು ಲಗತ್ತಿಸುವುದು.

6. ಇತ್ತೀಚಿನ ಸ್ಟ್ಯಾಂಪ ಅಳತೆಯ 2 ಭಾವ ಚಿತ್ರಗಳನ್ನು ನೀಡುವುದು

7. ಉಚಿತ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳು, ಅಪಘಾತ ಪರಿಹಾರ ನಿಧಿ ಶುಲ್ಕ  ಹಾಗೂ ಸಂಸ್ಕರಣ ಶುಲ್ಕ ಪಾವತಿಸುವುದು (ಪ್ರಸ್ತುತ ರೂ. 150.00.)

8. ರಿಯಾಯಿತಿ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳು, ಪಾಸ್‍ದರ, ಅಪಘಾತ ಪರಿಹಾರ ನಿಧಿ ಶುಲ್ಕ  ಹಾಗೂ ಸಂಸ್ಕರಣ ಶುಲ್ಕ ಪಾವತಿಸುವುದು.

9. 2017-18ನೇ ಸಾಲಿನಿಂದ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದ್ದು, ಈ ವರ್ಗದಡಿ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳು  ಜಾತಿ ಪ್ರಮಾಣ ಪತ್ರ ಸಲ್ಲಿಸುವುದು.

10. ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ಕ.ಕ.ರ.ಸಾ.ಸಂಸ್ಥೆಯ ಸಾರಿಗೆಗಳು ಕಾರ್ಯಾಚರಣೆಯಾಗುವ ಮಾರ್ಗಗಳಲ್ಲಿ ಮಾತ್ರ ವಿತರಿಸಲಾಗುವುದು.

 

ಇತ್ತೀಚಿನ ನವೀಕರಣ​ : 14-07-2021 12:40 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080